ಎರಡು ತಿಂಗಳಲ್ಲಿ ಭಾರತಕ್ಕೆ 60 ಉಗ್ರರ ಪ್ರವೇಶ, ಗಡಿಯಲ್ಲಿ ಕಟ್ಟೆಚ್ಚರ
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಕಾರಣವಾಗಿದ್ದ 370ನೇ ವಿಧಿ ರದ್ದುಗೊಳಿಸಿರುವ ವಿಷಯ ಭಾರತ ಹಾಗೂ ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಳಕ್ಕೆ ಕಾರಣವಾಗಿರುವ ಬೆನ್ನಲ್ಲೇ ಕಳೆದ 2 ತಿಂಗಳಲ್ಲಿ 60 ಉಗ್ರರು ದೇಶ ಪ್ರವೇಶಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಹಾಗಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಯೋತ್ಪಾದನಾ ಕೃತ್ಯಗಳನ್ನು ನಡೆಸುವ ಉದ್ದೇಶದಿಂದ ಈ ಉಗ್ರರು ಭಾರತಕ್ಕೆ ನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹತಿ ನೀಡಿದ್ದು, ಕಳೆದ 3 ವರ್ಷಗಳಲ್ಲಿ ಅನೇಕ ಮಂದಿ ಉಗ್ರರು ಒಳ ಪ್ರವೇಶಿಸಿದ್ದು, ಪ್ರಸ್ತುತ 500 ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯ ಬಳಿ ಇದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮುಂದೆ ಸಾಲು ಸಾಲು ಹಬ್ಬಗಳಿದ್ದು, ಉಗ್ರರ ಕರಿನೆರಳ ಹಿನ್ನೆಲೆಯಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆಗಳು ಭಾರತದಲ್ಲಿ ಬಹುದೊಡ್ಡ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಪರಿಶೀಲನೆಯ ವೇಳೆ ತಿಳಿದುಬಂದಿದೆ.
|